ಆತ್ಮೀಯ ಲೋಕದಲ್ಲಿ ಕ್ರಿಸ್ತನಲ್ಲಿ ನಂಬಿಕೆಯುಳ್ಳವರ ಅಧಿಕಾರ ಪತನದ ಮೊದಲು ಅಧಿಕಾರ – ಆದಿಕಾಂಡ 1:26 ಆತ್ಮೀಯ ಲೋಕದಲ್ಲಿ ಕ್ರಿಸ್ತನಲ್ಲಿ ನಂಬುವವರ ಅಧಿಕಾರ ಅಧಿಕಾರ ಮೊದಲು ಪತನ ಆದಿಕಾಂಡ 1 26 ಆಮೇಲೆ ದೇವರು - ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟುಮಾಡೋಣ; ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿವಿುಕೀಟಗಳ ಮೇಲೆಯೂ ಎಲ್ಲಾ ಭೂವಿುಯ ಮೇಲೆಯೂ ದೊರೆತನಮಾಡಲಿ ಅಂದನು. 28 ಇದಲ್ಲದೆ …
ಆತ್ಮೀಯ ಲೋಕದಲ್ಲಿ ಕ್ರಿಸ್ತನಲ್ಲಿ ನಂಬಿಕೆಯುಳ್ಳವರ ಅಧಿಕಾರ ಪತನದ ಮೊದಲು ಅಧಿಕಾರ – ಆದಿಕಾಂಡ 1:26
ಆತ್ಮೀಯ ಲೋಕದಲ್ಲಿ ಕ್ರಿಸ್ತನಲ್ಲಿ ನಂಬುವವರ ಅಧಿಕಾರ
ಅಧಿಕಾರ ಮೊದಲು ಪತನ
ಆದಿಕಾಂಡ 1
26 ಆಮೇಲೆ ದೇವರು – ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟುಮಾಡೋಣ;
ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ
ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿವಿುಕೀಟಗಳ ಮೇಲೆಯೂ ಎಲ್ಲಾ ಭೂವಿುಯ ಮೇಲೆಯೂ ದೊರೆತನಮಾಡಲಿ ಅಂದನು.
28 ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ – ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ ಭೂವಿುಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ.
ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂವಿುಯಲ್ಲಿ ಚಲಿಸುವ
ಎಲ್ಲಾ ಜೀವಿಗಳ ಮೇಲೆಯೂ ದೊರೆತನಮಾಡಿರಿ ಅಂದನು.
*ಅಧಿಕಾರದೊಂದಿಗೆ ಎಪ್ಪತ್ತು ಮಂದಿಯನ್ನು ಕಳುಹಿಸಲಾಯಿತ
ಲೂಕನು 10
1 ಇದಾದನಂತರ, ಯೇಸು ಇನೂ ಎಪ್ಪತ್ತೆರಡು ಮಂದಿಯನ್ನು ಆರಿಸಿಕೊಂಡು ತಾನು ಹೋಗಬೇಕೆಂದು ಯೋಚಿಸಿದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಅವರನ್ನು ಇಬ್ಬಿಬ್ಬರನ್ನಾಗಿ ಮುಂಚಿತವಾಗಿ ಕಳುಹಿಸಿದನು.
2 ಯೇಸು ಅವರಿಗೆ, “ಬೆಳೆಯು ಬಹಳ, ಆದರೆ ಕೆಲಸಗಾರರು ಕೆಲವರೇ. ದೇವರೇ ಬೆಳೆಗೆ (ಜನರ) ಯಜಮಾನನು. ಬೆಳೆಯನ್ನು ಒಟ್ಟುಗೂಡಿಸುವುದಕ್ಕಾಗಿ ಹೆಚ್ಚು ಕೆಲಸಗಾರರನ್ನು ಕಳುಹಿಸಿಕೊಡುವಂತೆ ಯಜಮಾನನನ್ನು ಬೇಡಿಕೊಳ್ಳಿರಿ.
3 “ಈಗ ನೀವು ಹೋಗಬಹುದು. ಆದರೆ ನನ್ನ ಈ ಮಾತನ್ನು ಕೇಳಿರಿ! ತೋಳಗಳ ಮಧ್ಯೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನು ಕಳುಹಿಸುತ್ತಿದ್ದೇನೆ.
4 ಕೈಚೀಲವನ್ನಾಗಲಿ ಹಣವನ್ನಾಗಲಿ ಅಥವಾ ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ನಿಂತುಕೊಂಡು ಜನರೊಡನೆ ಮಾತನಾಡಬೇಡಿ.
5 ನೀವು ಮನೆಯೊಳಗೆ ಹೋಗುವ ಮೊದಲು, ‘ನಿಮಗೆ ಶುಭವಾಗಲಿ’ ಎಂದು ಹೇಳಿರಿ.
6 ಆ ಮನೆಯಲ್ಲಿ ಶಾಂತಸ್ವಭಾವದ ಮನುಷ್ಯನಿದ್ದರೆ, ನಿಮ್ಮ ಆಶೀರ್ವಾದ ಅವನಿಗೆ ದೊರೆಯುವುದು. ಅವನು ಶಾಂತಸ್ವಭಾವದವನಾಗಿಲ್ಲದಿದ್ದರೆ ನಿಮ್ಮ ಆಶೀರ್ವಾದ ನಿಮಗೇ ಹಿಂತಿರುಗಿ ಬರುವುದು.
7 ಆ ಮನೆಯಲ್ಲಿ ಇಳಿದುಕೊಂಡು ಅವರು ಕೊಡುವುದನ್ನು ತಿನ್ನಿರಿ, ಕುಡಿಯಿರಿ. ಕೆಲಸಗಾರನು ಸಂಬಳಕ್ಕೆ ಯೋಗ್ಯನಾಗಿದ್ದಾನೆ. ಆದ್ದರಿಂದ ಇಳಿದುಕೊಳ್ಳುವುದಕ್ಕಾಗಿ ಆ ಮನೆಯನ್ನು ಬಿಟ್ಟು ಇನ್ನೊಂದು ಮನೆಗೆ ಹೋಗಬೇಡಿರಿ.
8 “ನೀವು ಒಂದು ಊರಿಗೆ ಹೋದಾಗ ಆ ಊರಿನ ಜನರು ನಿಮ್ಮನ್ನು ಸ್ವಾಗತಿಸಿದರೆ, ಅವರು ಕೊಡುವ ಆಹಾರವನ್ನು ಊಟಮಾಡಿರಿ. 9 ಅಲ್ಲಿಯ ರೋಗಿಗಳನ್ನು ವಾಸಿಮಾಡಿರಿ. ಅಲ್ಲಿಯ ಜನರಿಗೆ, ‘ದೇವರ ರಾಜ್ಯವು ಸಮೀಪಿಸುತ್ತಿದೆ!’ ಎಂದು ತಿಳಿಸಿರಿ.
10 “ಆದರೆ ನೀವು ಒಂದು ಊರಿಗೆ ಹೋದಾಗ, ಅಲ್ಲಿಯ ಜನರು ನಿಮ್ಮನ್ನು ಸ್ವಾಗತಿಸದಿದ್ದರೆ, ನೀವು ಆ ಊರಿನ ಬೀದಿಗಳಿಗೆ ಹೋಗಿ,
11 ‘ನಮ್ಮ ಕಾಲುಗಳಿಗೆ ಹತ್ತಿದ ನಿಮ್ಮ ಊರಿನ ಧೂಳನ್ನು ನಿಮಗೆ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ದೇವರ ರಾಜ್ಯ ಸಮೀಪಿಸುತ್ತಿದೆ ಎಂಬುದು ನಿಮಗೆ ತಿಳಿದಿರಲಿ’ ಎಂದು ಹೇಳಿರಿ.
12 ನ್ಯಾಯತೀರ್ಪಿನ ದಿನದಲ್ಲಿ ಆ ಜನರ ಗತಿಯು ಸೊದೋಮಿನ ಜನರ ಗತಿಗಿಂತಲೂ ಕಠಿಣವಾಗಿರುವುದು” ಎಂದು ಹೇಳಿದನು.
ನಂಬಲೊಲ್ಲದ ಜನರಿಗೆ ಯೇಸುವಿನ ಎಚ್ಚರಿಕೆ
13 “ಕೊರಾಜಿನೇ, ಬೆತ್ಸಾಯಿದವೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮಲ್ಲಿ ನಾನು ಅನೇಕ ಸೂಚಕಕಾರ್ಯಗಳನ್ನು ಮಾಡಿದೆನು. ಅದೇ ಸೂಚಕ ಕಾರ್ಯಗಳು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅವುಗಳ ಜನರು ಬಹಳ ಹಿಂದೆಯೇ, ತಮ್ಮ ಜೀವಿತಗಳನ್ನು ಮಾರ್ಪಡಿಸಿಕೊಂಡು, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು, ಗೋಣಿತಟ್ಟನ್ನು ಧರಿಸಿಕೊಂಡು, ಬೂದಿಯನ್ನು ಬಳಿದುಕೊಳ್ಳುತ್ತಿದ್ದರು.
14 ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿನ್ನ ಸ್ಥಿತಿಯು ಟೈರ್ ಮತ್ತು ಸಿದೋನ್‌ಗಳ ಸ್ಥಿತಿಗಿಂತಲೂ ಕಠಿಣವಾಗಿರುವುದು.
15 ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ!
16 “ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು.
ಎಪ್ಪತ್ತು ಮಂದಿ ಆನಂದದಿಂದ ಹಿಂದಿರುಗಿದರು
17 ಎಪ್ಪತ್ತೆರಡು ಮಂದಿ ಶಿಷ್ಯರು ತಮ್ಮ ಪ್ರವಾಸದಿಂದ ಹಿಂತಿರುಗಿ ಬಂದಾಗ ಬಹಳ ಸಂತೋಷವಾಗಿದ್ದರು. ಅವರು ಯೇಸುವಿಗೆ, “ಪ್ರಭುವೇ, ನಾವು ನಿನ್ನ ಹೆಸರನ್ನು ಹೇಳಿದಾಗ ದೆವ್ವಗಳು ಸಹ ನಮಗೆ ವಿಧೇಯವಾದವು!” ಎಂದು ಹೇಳಿದರು.
18 ಯೇಸು ಅವರಿಗೆ, “ಸೈತಾನನು ಮಿಂಚಿನೋಪಾದಿಯಲ್ಲಿ ಆಕಾಶದಿಂದ ಕೆಳಗೆ ಬೀಳುವುದನ್ನು ನಾನು ನೋಡಿದೆನು.
19 ಕೇಳಿರಿ! ಹಾವುಗಳ ಮತ್ತು ಚೇಳುಗಳ ಮೇಲೆ ನಡೆಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ವೈರಿಗಿರುವ ಅಧಿಕಾರಕ್ಕಿಂತಲೂ (ಸೈತಾನ) ಹೆಚ್ಚಿನ ಅಧಿಕಾರವನ್ನು ನಿಮಗೆ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದಿಲ್ಲ.
20 ಹೌದು, ದೆವ್ವಗಳೂ ನಿಮಗೆ ವಿಧೇಯವಾಗುತ್ತವೆ. ಈ ಅಧಿಕಾರ ನಿಮಗಿದೆ ಎಂಬುದರ ನಿಮಿತ್ತ ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂಬುದಕ್ಕಾಗಿ ಸಂತೋಷಪಡಿರಿ” ಅಂದನು.
ಯೇಸು ಆತ್ಮದಲ್ಲಿ ಆನಂದಪಟ್ಟನು
21ಬಳಿಕ ಯೇಸು ಪವಿತ್ರಾತ್ಮನ ಮೂಲಕ ಬಹಳ ಸಂತೋಷಗೊಂಡು ಹೀಗೆ ಪ್ರಾರ್ಥಿಸಿದನು: “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಾನು ನಿನ್ನನ್ನು ಸ್ತುತಿಸುತ್ತೇನೆ. ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಸಂಗತಿಗಳನ್ನು ಮರೆಮಾಡಿದ್ದಕ್ಕಾಗಿ ನಾನು ನಿನ್ನನ್ನು ಸ್ತುತಿಸುತ್ತೇನೆ. ಆದರೆ ನೀನು ಚಿಕ್ಕಮಕ್ಕಳಂತಿರುವ ಜನರಿಗೆ ಈ ಸಂಗತಿಗಳನ್ನು ಪ್ರಕಟಮಾಡಿದೆ. ಹೌದು, ತಂದೆಯೇ, ಅದೇ ನಿನ್ನ ಅಪೇಕ್ಷೆಯಾಗಿತ್ತು.
22 “ನನ್ನ ತಂದೆಯು ಎಲ್ಲವನ್ನೂ ನನಗೆ ಕೊಟ್ಟಿದ್ದಾನೆ. ಮಗನು ಯಾರೆಂಬುದು ಯಾರಿಗೂ ಗೊತ್ತಿಲ್ಲ. ತಂದೆಯೊಬ್ಬನಿಗೇ ಗೊತ್ತಿದೆ. ತಂದೆಯು ಯಾರೆಂಬುದು ಮಗನಿಗೆ ಮಾತ್ರ ಗೊತ್ತಿದೆ. ಮಗನು ತಂದೆಯ ಬಗ್ಗೆ ಯಾರಿಗೆ ತಿಳಿಸುತ್ತಾನೋ ಅವರು ಮಾತ್ರ ತಂದೆಯ ಬಗ್ಗೆ ತಿಳಿದುಕೊಳ್ಳುವರು.”
23 ಬಳಿಕ ಯೇಸು ತನ್ನ ಶಿಷ್ಯರ ಕಡೆಗೆ ತಿರುಗಿ ನೋಡಿದನು. ಅಲ್ಲಿ ಆತನ ಶಿಷ್ಯರು ಮಾತ್ರವಿದ್ದರು. ಯೇಸು ಅವರಿಗೆ, “ಈಗ ನಡೆಯುವ ಸಂಗತಿಗಳನ್ನು ನೋಡುತ್ತಿರುವ ನೀವು ಧನ್ಯರು!
24 ಅನೇಕ ಪ್ರವಾದಿಗಳೂ ಅರಸರೂ ಈಗ ನೀವು ನೋಡುತ್ತಿರುವ ಈ ಸಂಗತಿಗಳನ್ನು ನೋಡಬೇಕೆಂದು ಮತ್ತು ಈಗ ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರು. ಆದರೆ ಅವರಿಗೆ ಸಾಧ್ಯವಾಗಲಿಲ್ಲ” ಎಂದನು.
*ಹನ್ನೆರಡು ಮಂದಿಯನ್ನು ಕಳುಹಿಸುವುದು
ಮತ್ತಾಯ 10
1 ಮತ್ತು ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತರಕ್ಕೆ ಕರೆದು ದೆವ್ವಗಳನ್ನು ಬಿಡಿಸುವದಕ್ಕೂ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುವದಕ್ಕೂ ಅವರಿಗೆ ಅಧಿಕಾರಕೊಟ್ಟನು.
2 ಆತನು ಕಳುಹಿಸಿಕೊಟ್ಟ ಅಪೊಸ್ತಲರೆಂಬ ಹನ್ನೆರಡು ಮಂದಿಯ ಹೆಸರುಗಳು ಯಾವವಂದರೆ ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನ, ಅವನ ತಮ್ಮನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ತಮ್ಮನಾದ ಯೋಹಾನ,
3ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕದ ಮತ್ತಾಯ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ,
4ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ, ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಇವುಗಳೇ.
5ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು. ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ –
ಅನ್ಯಜನಗಳ ಕಡೆಗೆ ಹೋಗಬೇಡಿರಿ, ಸಮಾರ್ಯರ ಊರೊಳಗೆ ಕಾಲಿಡಬೇಡಿರಿ
6 ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲನ ಮನೆತನದವರ ಬಳಿಗೆ ಹೋಗಿರಿ.
7 ಪರಲೋಕರಾಜ್ಯವು ಸಮೀಪವಾಯಿತೆಂದು ಸಾರಿಹೇಳುತ್ತಾ ಹೋಗಿರಿ.
8ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠಹತ್ತಿದವರನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
9 ನಿಮ್ಮ ಹಮ್ಮೀಣಿಗಳಲ್ಲಿ ಹೊನ್ನು ಹಣ ದುಡ್ಡುಗಳನ್ನೂ ದಾರಿಗೆ ಹಸಿಬೆಯನ್ನೂ
10ಎರಡು ಅಂಗಿ ಕೆರ ಕೋಲು ಮೊದಲಾದವುಗಳನ್ನೂ ಸೌರಿಸಿಕೊಳ್ಳಬೇಡಿರಿ. ಆಳು ಅಂಬಲಿಗೆ ಯೋಗ್ಯನಷ್ಟೆ.
11ನೀವು ಯಾವದೊಂದು ಊರಿಗೆ ಅಥವಾ ಹಳ್ಳಿಗೆ ಸೇರಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅವರಲ್ಲೇ ಇರ್ರಿ.
12ಆ ಮನೆಯೊಳಕ್ಕೆ ಹೋಗುವಾಗ ಶುಭವಾಗಲಿ ಅನ್ನಿರಿ.
13ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಆಶೀರ್ವಾದವು ಅವರಿಗೆ ಆಗಲಿ; ಅಯೋಗ್ಯರಾಗಿದ್ದರೆ ನಿಮ್ಮ ಆಶೀರ್ವಾದವು ನಿಮಗೆ ಹಿಂದಕ್ಕೆ ಬರಲಿ.
14ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನು ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ದೂಳನ್ನು ಝಾಡಿಸಿಬಿಡಿರಿ.
15ನ್ಯಾಯವಿಚಾರಣೆಯ ದಿವಸದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಹನ್ನೆರಡು ಮಂದಿಯನ್ನು ಕಳುಹಿಸುವುದು
ಮಾರ್ಕ 6
7ಆತನು ಹಳ್ಳಿಪಳ್ಳಿಗಳನ್ನು ಸುತ್ತಿಕೊಂಡು ಉಪದೇಶ ಮಾಡುತ್ತಾ ಬಂದನು. ಮತ್ತು ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬರಿಬ್ಬರಾಗಿ ಕಳುಹಿಸಲಾರಂಭಿಸಿದನು. ಕಳುಹಿಸುವಾಗ ಅವರಿಗೆ ದೆವ್ವಗಳ ಮೇಲೆ ಅಧಿಕಾರಕೊಟ್ಟು
8ಕೋಲು ಹೊರತು ದಾರಿಗೆ ಏನೂ ತಕ್ಕೊಂಡು ಹೋಗಬೇಡಿರಿ; ಬುತ್ತಿ, ಹಸಿಬೆ, ಹಮ್ಮೀಣಿಯಲ್ಲಿ ದುಡ್ಡು ಬೇಡ,
9ಕೆರಗಳನ್ನು ಮೆಟ್ಟಿಕೊಳ್ಳಬಹುದು. ಎರಡು ಅಂಗಿಗಳನ್ನು ತೊಟ್ಟುಕೊಳ್ಳಬೇಡಿರಿ ಎಂದು ಅಪ್ಪಣೆಕೊಟ್ಟನು.
10ಇದಲ್ಲದೆ ಆತನು ಅವರಿಗೆ – ನೀವು ಎಲ್ಲಿಯಾದರೂ ಒಂದು ಮನೆಯಲ್ಲಿ ಇಳುಕೊಂಡಾಗ ಆ ಸ್ಥಳದಿಂದ ಹೊರಡುವ ತನಕ ಅಲ್ಲೇ ಇರಿ.
11ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಟುಹೋಗುವಾಗ ನಿಮ್ಮ ಕಾಲಿಗೆ ಹತ್ತಿದ ದೂಳನ್ನು ಝಾಡಿಸಿಬಿಡಿರಿ; ಅದು ಅವರಿಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
12ಅವರು ಹೊರಟುಹೋಗಿ ಜನರಿಗೆ – ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸಾರಿ
13ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆಹಚ್ಚಿ ವಾಸಿಮಾಡಿದರು.
ಹನ್ನೆರಡು ಮಂದಿಯನ್ನು ಕಳುಹಿಸುವುದು
ಲೂಕ 9
1ಆತನು ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಅಧಿಕಾರಗಳನ್ನು ಕೊಟ್ಟು
2ದೇವರ ರಾಜ್ಯದ ವಿಷಯವನ್ನು ಸಾರುವದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವದಕ್ಕೂ ಅವರನ್ನು ಕಳುಹಿಸಿದನು.
3ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ – ದಾರಿಗೆ ಏನೂ ತಕ್ಕೊಂಡು ಹೋಗಬೇಡಿರಿ, ಕೋಲು ಹಸಿಬೆ ಬುತ್ತಿ ಹಣ ಬೇಡ; ಎರಡಂಗಿಗಳಿರಬಾರದು.
4ಇದಲ್ಲದೆ ನೀವು ಯಾವ ಮನೆಯಲ್ಲಿ ಇಳುಕೊಂಡರೂ ಅಲ್ಲೇ ಇರ್ರಿ. ಅಲ್ಲಿಂದಲೇ ಹೊರಡಿರಿ.
5ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟು ಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿ ಬಿಡಿರಿ; ಅದು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರಲಿ ಅಂದನು.
6ಆಗ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರುತ್ತಾ ರೋಗಿಗಳಿಗೆ ವಾಸಿಮಾಡುತ್ತಾ ಗ್ರಾಮಗಳಲ್ಲೆಲ್ಲಾ ಸಂಚರಿಸಿದರು.
ಮಹಾ ನಿಯೋಗ
ಮತ್ತಾಯ 28
18ಆಗ ಯೇಸು ಹತ್ತರಕ್ಕೆ ಬಂದು – ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.
19ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ
20ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.
ಮಾರ್ಕ 16
14ತರುವಾಯ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕೂತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ಕಂಡವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.
15ಆಮೇಲೆ ಅವರಿಗೆ – ನೀವು ಲೋಕದ ಎಲ್ಲಾ ಕಡೆಗೆ ಹೋಗಿ ಜಗತ್ತಿಗೆಲ್ಲಾ ಸುವಾರ್ತೆಯನ್ನು ಸಾರಿರಿ.
16ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು; ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
17ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ನನ್ನ ಹೆಸರನ್ನು ಹೇಳಿ ದೆವ್ವಗಳನ್ನು ಬಿಡಿಸುವರು; ಹೊಸಭಾಷೆಗಳಿಂದ ಮಾತಾಡುವರು; ಹಾವುಗಳನ್ನು ಎತ್ತುವರು
18ವಿಷಪದಾರ್ಥವನ್ನೇನಾದರೂ ಕುಡಿದರೂ ಅವರಿಗೆ ಯಾವ ಕೇಡೂ ಆಗುವದಿಲ್ಲ; ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಗುಣವಾಗುವದು ಎಂದು ಹೇಳಿದನು.
19ಯೇಸುಸ್ವಾವಿುಯು ಅವರ ಕೂಡ ಮಾತಾಡಿದ ಮೇಲೆ ಆಕಾಶಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.
20ಇತ್ತಲಾಗಿ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರಿದರು ಮತ್ತು ಕರ್ತನು ಅವರ ಕೂಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸುತ್ತಾ ಇದ್ದನು.
ಸೈತಾನನನ್ನು ವಿರೋಧಿಸಿರಿ
ಯಾಕೋಬನು 4
7ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
ಎಫೆಸದವರಿಗೆ 4
25 ಆದಕಾರಣ ಸುಳ್ಳಾಡುವದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
26ಕೋಪಮಾಡಬೇಕಾದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ
27ಸೈತಾನನಿಗೆ ಅವಕಾಶಕೊಡಬೇಡಿರಿ
1 ಪೇತ್ರನು 5
8ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
9ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂದು ನಿಮಗೆ ತಿಳಿದದೆಯಲ್ಲಾ.
ಪ್ರಕಟನೆ ಮತ್ತು ಅಧಿಕಾರ
ಮತ್ತಾಯ 16
15ಆತನು ಅವರನ್ನು – ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಲಾಗಿ ಸೀಮೋನ್ ಪೇತ್ರನ
16ನೀನು ಬರಬೇಕಾಗಿರುವ ಕ್ರಿಸ್ತನು, ಜೀವಸ್ವರೂಪನಾದ ದೇವರ ಕುಮಾರನು ಎಂದು ಉತ್ತರಕೊಟ್ಟನು.
17ಅದಕ್ಕೆ ಯೇಸು – ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಈ ಗುಟ್ಟು ನಿನಗೆ ತಿಳಿಸಿದವನು ನರಮನುಷ್ಯನಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ತಿಳಿಸಿದನು.
18ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ – ನೀನು ಪೇತ್ರನು, ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು.
19ಪರಲೋಕರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು; ಭೂಲೋಕದಲ್ಲಿ ನೀನು ಯಾವದನ್ನು ಕಟ್ಟುತ್ತೀಯೋ, ಅದು ಪರಲೋಕದಲ್ಲಿಯೂ ಕಟ್ಟಿರುವದು; ಮತ್ತು ಭೂಲೋಕದಲ್ಲಿ ನೀನು ಯಾವದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಿರುವದು ಅಂದನು.
ನಾಲಿಗೆಯ ಅಧಿಕಾರ
1 ಯೋಹಾನನು 4
4ಪ್ರಿಯರಾದ ಮಕ್ಕಳೇ, ನೀವಂತೂ ದೇವರಿಂದ ಹುಟ್ಟಿದವರಾಗಿದ್ದೀರಿ; ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಹೆಚ್ಚಿನವನಾಗಿರುವದರಿಂದ ನೀವು ಆ ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ.
5ಅವರು ಲೋಕದಿಂದ ಹುಟ್ಟಿದವರಾಗಿದ್ದಾರೆ ಈ ಕಾರಣದಿಂದ ಅವರು ಲೋಕಪ್ರೇರಿತರಾಗಿ ಮಾತಾಡುತ್ತಾರೆ. ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
6ನಾವಂತೂ ದೇವರಿಂದ ಹುಟ್ಟಿದವರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ ದೇವರಿಂದ ಹುಟ್ಟದವನು ನಮ್ಮ ಮಾತನ್ನು ಕೇಳುವದಿಲ್ಲ.
ಇದು ಸತ್ಯವನ್ನು ಬೋಧಿಸುವ ಆತ್ಮ, ಅದು ಸುಳ್ಳನ್ನು ಬೋಧಿಸುವ ಆತ್ಮ ಎಂದು ಇದರಿಂದಲೇ ತಿಳುಕೊಳ್ಳುತ್ತೇವೆ.
ಜ್ಞಾನೋಕ್ತಿಗಳು 18
20ಮನುಷ್ಯನು ತನ್ನ ಬಾಯ ಬೆಳೆಯನ್ನು ಹೊಟ್ಟೆತುಂಬಾ ಉಣ್ಣುವನು; ತನ್ನ ತುಟಿಗಳ ಫಲವನ್ನು ಸಾಕಾದಷ್ಟು ತಿನ್ನುವನು.
21ಜೀವನಮರಣಗಳು ನಾಲಿಗೆಯ ವಶ,
ವಚನಪ್ರಿಯರು ಅದರ ಫಲವನ್ನು ಅನುಭವಿಸುವರು.
1 ಯೋಹಾನನು 3
8ಪಾಪಮಾಡುವವನು ಸೈತಾನನಿಂದ ಹುಟ್ಟಿದವನಾಗಿದ್ದಾನೆ; ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನಲ್ಲಾ. ಸೈತಾನನ ಕೆಲಸಗಳನ್ನು ಲಯ ಮಾಡುವದಕ್ಕೋಸ್ಕರವೇ ದೇವಕುಮಾರನು ಪ್ರತ್ಯಕ್ಷನಾದನು.
9ದೇವರಿಂದ ಹುಟ್ಟಿದವನು ಪಾಪಮಾಡನು; ದೇವರ ಜೀವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡುವವನಾಗಿರಲಾರನು
ಮತ್ತಾಯ 10
32ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.
33ಆದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.
ದೂತರು – ಸೇವೆ ಮಾಡುವ ಆತ್ಮಗಳು
ಇಬ್ರಿಯರಿಗೆ 1
13ಆದರೆ ದೇವದೂತರಲ್ಲಿ ಯಾವ ವಿಷಯದಲ್ಲಿಯಾದರೂ
ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವತನಕ
ನನ್ನ ಬಲಗಡೆಯಲ್ಲಿ ಕೂತುಕೊಂಡಿರು
ಎಂಬದಾಗಿ ಎಂದಾದರೂ ಹೇಳಿದ್ದಾನೋ?
14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ?
ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿದ್ದೇವೆ
ಎಫೆಸದವರಿಗೆ 2
4ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮ ಮೇಲೆ ಮಹಾ ಪ್ರೀತಿಯನ್ನಿಟ್ಟು
5ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ.)
6ಬದುಕಿಸಿದ್ದಲ್ಲದೆ ತಾನು ಕ್ರಿಸ್ತ ಯೇಸುವಿನಲ್ಲಿ ನಮಗೆ ಮಾಡುವ ಉಪಕಾರದ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು
7ಮುಂದಣ ಯುಗಗಳಲ್ಲಿ ತೋರಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ ಪರಲೋಕದಲ್ಲಿ ಆತನೊಂದಿಗೆ ಕೂಡ್ರಿಸಿದ್ದಾನೆ.
8ನಂಬಿಕೆಯ ಮೂಲಕ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ವರವೇ.
9ಅದು ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.
10ನಾವು ಆತನ ನಿರ್ಮಾಣ; ಸತ್ಕಾರ್ಯಗಳನ್ನು ಮಾಡುವದಕ್ಕಾಗಿಯೇ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟೆವು. ನಾವು ಸತ್ಕಾರ್ಯಗಳನ್ನು ನಡಿಸುವವರಾಗಿ ಬದುಕಬೇಕೆಂದು ದೇವರು ನಮ್ಮನ್ನು ಮೊದಲೇ ನೇವಿುಸಿದನು.
ಸ್ವೀಕಾರದಲ್ಲಿ ಇರುವ ಅಧಿಕಾರ
ಮತ್ತಾಯ 10
40 ನಿಮ್ಮನ್ನು ಸೇರಿಸಿಕೊಳ್ಳುವವನು ನನ್ನನ್ನು ಸೇರಿಸಿಕೊಳ್ಳುವವನಾಗಿದ್ದಾನೆ; ನನ್ನನ್ನು ಸೇರಿಸಿಕೊಳ್ಳುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಳ್ಳುವವನಾಗಿದ್ದಾನೆ.
41ಪ್ರವಾದಿಯನ್ನು ಪ್ರವಾದಿಯೆಂದು ಸೇರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸೇರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.
42ಮತ್ತು ಈ ಚಿಕ್ಕವರಲ್ಲಿ ಒಬ್ಬನಿಗೆ ಯೇಸುವಿನ ಶಿಷ್ಯನೆಂದು ಯಾವನಾದರೂ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.
ನಮ್ಮ ಯುದ್ಧದ ಆಯುಧಗಳು
2 ಕೊರಿಂಥದವರಿಗೆ 10
3 ನಾವು ಲೋಕದಲ್ಲಿದ್ದರೂ ಲೋಕಾನುಸಾರವಾಗಿ ಯುದ್ಧಮಾಡುವವರಲ್ಲ.
4ನಾವು ಉಪಯೋಗಿಸುವ ಆಯುಧಗಳು ಲೋಕಸಂಬಂಧವಾದ ಆಯುಧಗಳಲ್ಲ; ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.
5ನಾವು ವಿತರ್ಕಗಳನ್ನೂ ದೇವಜ್ಞಾನವನ್ನು ವಿರೋಧಿಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದ ಎಲ್ಲಾ ಕೊತ್ತಲಗಳನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
6ನಿಮ್ಮ ವಿಧೇಯತ್ವವು ಪರಿಪೂರ್ಣವಾದ ಮೇಲೆ ಎಲ್ಲಾ ಅವಿಧೇಯತ್ವಕ್ಕೆ ಶಿಕ್ಷೆ ಮಾಡುವದಕ್ಕೆ ಸಿದ್ಧರಾಗಿದ್ದೇವೆ.
ದೇವರ ಸಂಪೂರ್ಣ ಕವಚ
ಎಫೆಸದವರಿಗೆ 6
10 ಕಡೇ ಮಾತೇನಂದರೆ, ನೀವು ಕರ್ತನನ್ನೂ ಆತನ ಅತ್ಯಧಿಕವಾದ ಶಕ್ತಿಯನ್ನೂ ಆಶ್ರಯಿಸಿಕೊಂಡವರಾಗಿ ಬಲಗೊಳ್ಳಿರಿ.
11ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
12ನಾವು ಹೋರಾಡುವದು ಮನುಷ್ಯ ಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.
13ಆದದರಿಂದ ಕಠಿನ ಯುದ್ಧವು ನಡೆಯುವ ದಿವಸದಲ್ಲಿ ಆ ವೈರಿಗಳನ್ನು ಎದುರಿಸುವದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ಜಯಶಾಲಿಗಳಾಗಿ ನಿಲ್ಲುವದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ತೆಗೆದುಕೊಳ್ಳಿರಿ.
14ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಧರಿಸಿಕೊಂಡು
15ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
16ಮತ್ತು ನಂಬಿಕೆಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ; ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ.
17ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.
18ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
ಕೇಳುವ ಅಧಿಕಾರ
ಯೋಹಾನ 14
12 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವನು ನಾನು ನಡಿಸುವ ಕ್ರಿಯೆಗಳನ್ನು ತಾನೂ ನಡಿಸುವನು; ಮತ್ತು ಅವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ನಡಿಸುವನು. ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.
13ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ, ಅದನ್ನು ನೆರವೇರಿಸುವೆನು; ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವದು.
14ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ಅದನ್ನು ನೆರವೇರಿಸುವೆನು.
ಯೋಹಾನ 15
7 ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ಏನು ಬೇಕಾದರೂ ಬೇಡಿಕೊಳ್ಳಿರಿ, ಅದು ನಿಮಗೆ ದೊರೆಯುವದು
ಅಧಿಕಾರಾರ್ಥ ಪ್ರಾರ್ಥನೆ
ಕೊಲೊಸ್ಸೆಯವರಿಗೆ 1
9ಆದಕಾರಣ ನಾವು ನಿಮ್ಮ ಸುದ್ದಿಯನ್ನು ಕೇಳಿದ ದಿವಸದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲ ಆತ್ಮೀಯ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ
10ಕರ್ತನ ಚಿತ್ತದ ವಿಷಯವಾದ ತಿಳುವಳಿಕೆಯಿಂದ ತುಂಬಿಕೊಂಡು ಆತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು
ಸಂತೋಷಪಡಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯವೆಂಬ ಫಲವನ್ನು ಕೊಡುತ್ತಾ ದೇವಜ್ಞಾನದಿಂದ ಅಭಿವೃದ್ಧಿಯಾಗುತ್ತಿರಬೇಕೆಂತಲೂ
11ಆತನ ಮಹಿಮಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷ್ಠರಾಗಿ ಆನಂದಪೂರ್ವಕವಾದ ತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಯಾವಾಗಲೂ ತೋರಿಸುವವರಾಗಿರಬೇಕೆಂತಲೂ
12ಬೆಳಕಿನ ರಾಜ್ಯದೊಳಗೆ ದೇವಜನರ ಬಾಧ್ಯತೆಯಲ್ಲಿ ಪಾಲುಗಾರರಾಗುವದಕ್ಕೆ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇವೆ.
13ದೇವರು ನಮ್ಮನ್ನು ಅಂಧಕಾರದ ದೊರೆತನದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ರಾಜ್ಯದೊಳಗೆ ಸೇರಿಸಿದನು.
14ಆ ಕುಮಾರನಲ್ಲಿ ನಮ್ಮ ಪಾಪಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು.
ಎಫೆಸದವರಿಗೆ 1
15ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಕುರಿತೂ ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯನ್ನು ಕುರಿತೂ ಕೇಳಿ ನಾನು ನಿಮ್ಮ ನಿವಿುತ್ತವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರಮಾಡುತ್ತೇನೆ.
16ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆಮಾಡಿ
17ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ತಿಳುವಳಿಕೆಯನ್ನು ಕೊಟ್ಟು ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥಗಳನ್ನು ತಿಳುಕೊಳ್ಳುವ ಜ್ಞಾನವುಳ್ಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.
18ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನಿಂದ ಕರಿಸಿಕೊಂಡವರು ನಿರೀಕ್ಷಿಸುವ ಪದವಿ ಎಂಥದೆಂಬದನ್ನೂ ದೇವಜನರೆಂಬ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
19ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದದ್ದೆಂಬದನ್ನೂ ನೀವು ತಿಳುಕೊಳ್ಳುವಂತೆ ಅನುಗ್ರಹಿಸಲಿ.
20ಆತನ ಬಲಾತಿಶಯವು ಎಷ್ಟು ಮಹತ್ತಾದದ್ದೆಂಬದು ಕ್ರಿಸ್ತನಲ್ಲಿ ತೋರಿಬಂದಿದೆ. ಹೇಗಂದರೆ ಆತನು ಸತ್ತಿದ್ದ ಕ್ರಿಸ್ತನನ್ನು ಬದುಕಿಸಿ
21ಪರಲೋಕದೊಳಗೆ ಸಕಲ ರಾಜ್ಯತ್ವ ಅಧಿಕಾರ ಮಹತ್ವ ಪ್ರಭುತ್ವಾದಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ತನ್ನ ಬಲಗಡೆಯಲ್ಲಿ ಕೂಡ್ರಿಸಿಕೊಂಡನು.
22ಆತನು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇವಿುಸಿದನು.
23ಸಭೆಯು ಆತನ ದೇಹವಾಗಿದೆ; ಎಲ್ಲವನ್ನೂ ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳದ್ದಾಗಿದೆ.
ಮಹಿಮೆಯ ಭರವಸೆ
ಕೊಲೊಸ್ಸೆಯವರಿಗೆ 1
25ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕೆಲಸವನ್ನು ನಿಮ್ಮ ಪ್ರಯೋಜನಕ್ಕೋಸ್ಕರ ನನಗೆ ದಯಪಾಲಿಸಿದನು.
26ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲತಲಾಂತರಗಳಿಂದಲೂ ಮರೆಯಾಗಿತ್ತು; ಈಗಿನ ಕಾಲದಲ್ಲಿ ದೇವಜನರಿಗೆ ತಿಳಿಸಲ್ಪಟ್ಟಿದೆ.
27ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.
ಕ್ರಿಸ್ತ ಯೇಸುವಿನಲ್ಲಿ ಅಧಿಕಾರ
ಯೋಹಾನ 1
10ಆತನು ಲೋಕದಲ್ಲಿ ಇದ್ದನು; ಮತ್ತು ಲೋಕವು ಆತನ ಮೂಲಕವಾಗಿ ಉಂಟಾಯಿತು; ಆದರೂ ಲೋಕವು ಆತನನ್ನು ಅರಿಯಲಿಲ್ಲ.
11ಆತನು ತನ್ನ ಸ್ವಾಸ್ಥ್ಯಕ್ಕೆ ಬಂದನು; ಆದರೆ ಸ್ವಂತಜನರು ಆತನನ್ನು ಅಂಗೀಕರಿಸಲಿಲ್ಲ.
12ಯಾರಾರು ಆತನನ್ನು ಅಂಗೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ, ಅವರಿಗೆ ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು.
13ಇವರು ರಕ್ತಸಂಬಂಧದಿಂದಾಗಲಿ ಕಾಮದಿಂದಾಗಲಿ ಪುರುಷಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
ಕೊಲೊಸ್ಸೆಯವರಿಗೆ 2
11ಆತನು ಎಲ್ಲಾ ದೊರೆತನಗಳಿಗೂ ಅಧಿಕಾರಿಗಳಿಗೂ ಶಿರಸ್ಸು. ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದಿರಿ; ಈ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಇದು ಪಾಪಾಧೀನಸ್ವಭಾವವನ್ನು ವಿಸರ್ಜಿಸುವದೇ; ಇದೇ ಕ್ರಿಸ್ತೀಯ ಸುನ್ನತಿ
12ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟದ್ದರಿಂದಲೇ ಆ ಸುನ್ನತಿಯನ್ನು ಹೊಂದಿದಿರಿ. ಇದಲ್ಲದೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಸಾಮರ್ಥ್ಯದಲ್ಲಿ ನಂಬಿಕೆಯಿಡುವದರ ಮೂಲಕ ಅದರಲ್ಲಿ ಆತನ ಕೂಡ ಎದ್ದು ಬಂದಿರಿ.
13ಅಪರಾಧಗಳನ್ನು ಮಾಡುವದರಿಂದಲೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ಸಹ ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ.
14ಆತನು ನಮ್ಮ ಅಪರಾಧಗಳನ್ನೆಲ್ಲಾ ಕ್ಷವಿುಸಿ ನಮ್ಮ ಮೇಲೆ ದೋಷಾರೋಪಣೆಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ಕೆಡಿಸಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.
15ಆತನು ದೊರೆತನಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಜಯೋತ್ಸವ ಮಾಡುತ್ತಾನೋ ಎಂಬಂತೆ ಶಿಲುಬೆಯ ಮೇಲೆ ಅವುಗಳನ್ನು ಜಯಿಸಲ್ಪಟ್ಟವುಗಳನ್ನಾಗಿ ಮೆರಸುತ್ತಾ ತೋರಿಸಿದನು.
ಆತ್ಮದಲ್ಲಿ ಮತ್ತೆ ಹುಟ್ಟುವುದರಿಂದ ಬರುವ ಅಧಿಕಾರ
ಅಪೊಸ್ತಲರ ಕೃತ್ಯಗಳು 1
8ಆದರೆ ಪವಿತ್ರಾತ್ಮ ನಿಮ್ಮ ಮೇಲೆ ಬರಲು ನೀವು ಬಲವನ್ನು ಹೊಂದಿ ಯೆರೂಸಲೇವಿುನಲ್ಲಿಯೂ ಎಲ್ಲಾ ಯೂದಾಯ ಸಮಾರ್ಯ ಸೀಮೆಗಳಲ್ಲಿಯೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರಬೇಕು ಅಂದನು.
ಯೋಹಾನ 3
5ಅದಕ್ಕೆ ಯೇಸು – ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟದಿದ್ದರೆ ದೇವರ ರಾಜ್ಯಕ್ಕೆ ಸೇರಲಾರನು.
6ದೇಹದಿಂದ ಹುಟ್ಟಿದ್ದು ದೇಹವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.
7ನೀವು ಹೊಸದಾಗಿ ಹುಟ್ಟಬೇಕು ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.
8ಗಾಳಿಯು ಮನಸ್ಸು ಬಂದ ಕಡೆ ಬೀಸುತ್ತದೆ; ಅದರ ಸಪ್ಪಳವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು; ಆತ್ಮನಿಂದ ಹುಟ್ಟಿದವರೆಲ್ಲರು ಅದರಂತೆಯೇ ಅಂದನು.
16ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
1 ಯೋಹಾನನು 5
4 ಯಾಕಂದರೆ ದೇವರಿಂದ ಹುಟ್ಟಿರುವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥದು ನಮ್ಮ ನಂಬಿಕೆಯೇ.
1 ಪೇತ್ರನು 1
22ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.
23ನೀವು ಪುನರ್ಜನ್ಮ ಹೊಂದಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ, ನಾಶವಾಗದ ಬೀಜದಿಂದಲೇ ಉಂಟಾದದ್ದು. ಅದು ದೇವರ ಸದಾಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
ತೀತನಿಗೆ 3
4 ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ
5 ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
6 ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
7 ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
ಆತ್ಮೀಯ ಅಧಿಕಾರಕ್ಕೆ ವಿಧೇಯರಾಗುವುದು
ಇಬ್ರಿಯರಿಗೆ 13
7ಅವರು ಯಾವ ರೀತಿಯಿಂದ ನಡೆದುಕೊಂಡು ಪ್ರಾಣಬಿಟ್ಟರೆಂಬದನ್ನು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
17ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
ಪ್ರೇಷಿತರ ಕಾರ್ಯಕಲಾಪಗಳು 20
27ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.
28ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.
1 ಕೊರಿಂಥದವರಿಗೆ 16
15ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದೂ ಅವರು ದೇವಜನರಿಗೆ ಸೇವೆಮಾಡುವದಕ್ಕಾಗಿ ಕೈಹಾಕಿದರೆಂದೂ ನೀವು ಬಲ್ಲಿರಷ್ಟೆ.
1 ಥೆಸಲೋನಿಕದವರಿಗೆ 5
12ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು
13ನಿಮಗೆ ಬುದ್ಧಿ ಹೇಳುತ್ತಾರೋ ಅವರನ್ನು ಲಕ್ಷಿಸಿ ಅವರ ಕೆಲಸದ ನಿವಿುತ್ತ ಅವರನ್ನು ಪ್ರೀತಿಯಿಂದ ಬಹಳವಾಗಿ ಸನ್ಮಾನಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರಿ.





